ಶ್ರೀ ಕ್ಷೇತ್ರ ವರದಹಳ್ಳಿಯಲ್ಲಿ ಶ್ರೀಧರ ಸ್ವಾಮಿಗಳ ಆರಾಧನಾ ಮಹೋತ್ಸವ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶ್ರೀ ಕ್ಷೇತ್ರ ವರದಹಳ್ಳಿಯಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 8ರವರೆಗೆ ಭಗವಾನ್ ಶ್ರೀಧರ ಸ್ವಾಮಿಗಳ 50ನೇ ಆರಾಧನಾ ಮಹೋತ್ಸವವನ್ನು ನಡೆಸಲಾಗುತ್ತಿದೆ.

ಈ ಸಂದರ್ಭದಲ್ಲಿ ರಾಮ ತಾರಕ ಹವನ, ಕೃಷ್ಣ ಯಜುರ್ವೇದ ಸಂಹಿತಾ ಹವನ ನಡೆಯಲಿದ್ದು, ಏಪ್ರಿಲ್ 8ರಂದು ವೇದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.

ಅಲ್ಲದೆ ಈ ಅವಧಿಯಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಿಕೊಡಬೇಕೆಂದು ಶ್ರೀ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read