ಶ್ವಾಸಕೋಶದ ಆರೋಗ್ಯ ಕಾಪಾಡಿಕೊಳ್ಳಲು ಸೇವಿಸಿ ಈ ಹಣ್ಣು

News18 Kannada - ಶ್ವಾಸಕೋಶ ಸಮಸ್ಯೆಯಿಂದ ಪಾರಾಗಲು ಸೇವಿಸಬೇಕಾದ ಆಹಾರಗಳಿವು | Foods that clean your lungs naturally! - Karnataka Kannada News, Today's Latest News in Kannada

ಚಳಿಯ ವಾತಾವರಣದಲ್ಲಿ ರೋಗಗಳು ಮತ್ತು ಸೋಂಕುಗಳಿಂದ ನಿಮ್ಮನ್ನ ನೀವು ರಕ್ಷಿಸಿಕೊಳ್ಳುವುದು ಅತಿ ಅವಶ್ಯಕ. ಚಳಿಗಾಲದಲ್ಲಿ ಹೆಚ್ಚಾಗಿ ಶ್ವಾಸಕೋಶದ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಶ್ವಾಸಕೋಶದ ಸಮಸ್ಯೆಗಳನ್ನು ನಿವಾರಿಸಲು ವಿಟಮಿನ್ ಸಿಯನ್ನು ಹೆಚ್ಚಾಗಿ ಸೇವಿಸಿ.

*ಕಿತ್ತಳೆ: ಕಿತ್ತಳೆಯಲ್ಲಿ ವಿಟಮಿನ್ ಸಿ ಅಧಿಕವಾಗಿದ್ದು, ಇದು ದೇಹಕ್ಕೆ ಖನಿಜಗಳು ಮತ್ತು ಜೀವಸತ್ವಗಳನ್ನು ನೀಡುತ್ತದೆ. ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ಸ್ಟ್ರಾಬೆರಿ: ಇದರಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆಗಳು ದೂರವಾಗತ್ತದೆ.

*ದ್ರಾಕ್ಷಿ: ಈ ಹಣ್ಣಿನಲ್ಲಿ ವಿಟಮಿನ್ ಸಿ ಜೊತೆಗೆ ಕೊಬ್ಬು, ಪ್ರೋಟೀನ್, ವಿಟಮಿನ್ ಕೆ, ಪೊಟ್ಯಾಶಿಯಂ, ಫೈಬರ್ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ದೇಹದ ವಿಷವನ್ನು ಹೊರಹಾಕುತ್ತದೆ.

*ಕಿವಿ: ಇದರಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್ ಗಳು ಇದೆ. ಇದು ರೋಗ ನಿರೋಧಕ ಶಕ್ತಿಯನ್ನು ಉತ್ತೇಜಿಸಿ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

*ದಾಳಿಂಬೆ: ಇದರಲ್ಲಿ ವಿಟಮಿನ್ ಸಿ, ಪೊಟ್ಯಾಶಿಯಂ, ಫೈಬರ್ ಹೆಚ್ಚಾಗಿರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read