ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಮಹಾಲಕ್ಷ್ಮಿಯು ಐಶ್ವರ್ಯ ಪ್ರಾಪ್ತಿಸಲಿ: ನಿಖಿಲ್​ ಕುಮಾರಸ್ವಾಮಿ

ಬೆಂಗಳೂರು: ಚುನಾವಣಾ ಅಕ್ರಮ ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ರಾಹುಲ್ ಗಾಂಧಿಯವರಿಗೆ ಜೆಡಿಎಸ್​​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ವರಮಹಾಲಕ್ಷ್ಮೀ ಹಬ್ಬದ ಶುಭ ಕೋರೊದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ನಿಖಿಲ್, ರಾಹುಲ್​ ಗಾಂಧಿ ಅವರೇ, ನಮ್ಮ ಕರ್ನಾಟಕಕ್ಕೆ ಸ್ವಾಗತ. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು. ಕಳೆದ 3 ವರ್ಷದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 3 ಲಕ್ಷ ಕೋಟಿ ರೂ ಸಾಲ ಮಾಡಿದೆ. ರಾಜ್ಯದ GSDPಯಲ್ಲಿ ಸಾಲದ ಪ್ರಮಾಣ 24.91% ಆಗಿದೆ ಎಂದಿದ್ದಾರೆ.

ನಿಮ್ಮ ಗ್ಯಾರಂಟಿ ಯೋಜನೆಗೆ ಪ್ರತಿ ವರ್ಷ ಬೇಕಾಗಿರುವುದು 55 ಸಾವಿರ ಕೋಟಿ ರೂ, ಕಳೆದ 3 ವರ್ಷದಿಂದ ನಿಮ್ಮ ಸರ್ಕಾರ ಮಾಡುತ್ತಿರುವ ಸಾಲ ವರ್ಷಕ್ಕೆ 1 ಲಕ್ಷ ಕೋಟಿ ರೂ. ನಿಮ್ಮ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ. ತಾಯಿ ಮಹಾಲಕ್ಷ್ಮಿಯು ಹಣಕಾಸು ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಸರ್ವಐಶ್ವರ್ಯ ಪ್ರಾಪ್ತಿಸಲಿ ಎಂದು ಪ್ರಾರ್ಥನೆ ಮಾಡೋಣ ಎಂದಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read