HomeKarnatakaಸಂಕ್ರಾಂತಿಗಲ್ಲ; ಜನವರಿ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಡಿ.ಕೆ.ಶಿಗೆ ಪರೋಕ್ಷ ಟಾಂಗ್ ಕೊಟ್ಟ...

ಸಂಕ್ರಾಂತಿಗಲ್ಲ; ಜನವರಿ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಡಿ.ಕೆ.ಶಿಗೆ ಪರೋಕ್ಷ ಟಾಂಗ್ ಕೊಟ್ಟ ಸಿದ್ದರಾಮಯ್ಯ

ವಿಜಯನಗರ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಜನವರಿ ಅಂತ್ಯದ ವೇಳೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಜಯನಗರದ ಹಗರಿಬೊಮ್ಮನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಂಕ್ರಾಂತಿಗೆ ಅಲ್ಲ, ಜನವರಿ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಾಗುವುದು ಎಂದರು. ಈ ಮೂಲಕ ಸಂಕ್ರಾಂತಿಗೆ ಮೊದಲ ಪಟ್ಟಿ ಬಿಡುಗಡೆ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ 224 ಕ್ಷೇತ್ರಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದಾರೆ. 2023ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular