HomeEntertainmentಸಂಕ್ರಾಂತಿ ಹಬ್ಬಕ್ಕೆ 'ವಾಮನ' ಚಿತ್ರದ ಹೊಸ ಪೋಸ್ಟರ್ ಬಿಡುಗಡೆ

ಸಂಕ್ರಾಂತಿ ಹಬ್ಬಕ್ಕೆ ‘ವಾಮನ’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ

‘ಬಜಾರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿ ತಮ್ಮ ಮಾಸ್ ಡೈಲಾಗ್ ಮೂಲಕವೇ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ನಟ ದನ್ವೀರ್ ಇದೀಗ ಮತ್ತೊಮ್ಮೆ ಆಕ್ಷನ್ ಥ್ರಿಲ್ಲರ್ ಕಥಾಧಾರಿತ ‘ವಾಮನ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ನಟ ದನ್ವೀರ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿ ಎಂದು ಎಲ್ಲರಿಗೂ ಗೊತ್ತೇ ಇದೆ. ಇತ್ತೀಚೆಗಷ್ಟೇ  ‘ಬೈ ಟು ಲವ್’ ಚಿತ್ರದಲ್ಲಿ ದನ್ವೀರ್ ಕೊನೆಯದಾಗಿ ಕಾಣಿಸಿಕೊಂಡಿದ್ದರು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ಲೋಬಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ಚೇತನ್ ಗೌಡ ‘ವಾಮನ’ ಚಿತ್ರವನ್ನು ನಿರ್ಮಾಣ ಮಾಡಿದ್ದು, ಶಂಕರ್ ರಾಮನ್ ನಿರ್ದೇಶಿಸಿದ್ದಾರೆ. ದನ್ವೀರ್ ಗೌಡಗೆ ಜೋಡಿಯಾಗಿ ರಚನಾ ಹಾಗೂ ರೇಷ್ಮಾ ನಾಣಯ್ಯ  ಅಭಿನಯಿಸಿದ್ದಾರೆ. ಇನ್ನೇನು  ಶೂಟಿಂಗ್ ಕೊನೆಯ ಹಂತಕ್ಕೆ ಬಂದಿದ್ದು, ಸದ್ಯದಲ್ಲೇ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular