ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್; ಸಂಕ್ರಾಂತಿಗೆ ಅವಕಾಶ ಸಿಗುವ ಸಾಧ್ಯತೆ

Karnataka BJP Leader KS Eshwarappa Says Muslims Don't Trust Us, So Won't  Give Ticketsಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಕೊನೆಗೂ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಸಂಕ್ರಾಂತಿ ಬಳಿಕ 6 ಮಂದಿಗೆ ಸಚಿವರಾಗುವ ಅವಕಾಶ ಸಿಗಲಿದೆ ಎನ್ನಲಾಗುತ್ತಿದ್ದು, ಈ ಪೈಕಿ ಕೆ.ಎಸ್. ಈಶ್ವರಪ್ಪನವರು ಸಚಿವರಾಗುವುದು ಖಚಿತ ಎಂದು ಹೇಳಲಾಗಿದೆ.

ಇನ್ನುಳಿದಂತೆ ರಮೇಶ್ ಜಾರಕಿಹೊಳಿಯವರನ್ನು ಸಹ ಮತ್ತೆ ಸಂಪುಟ ಸೇರ್ಪಡೆಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಇದರ ಜೊತೆಗೆ ಪ್ರಸ್ತುತ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದೇ ಇರುವ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗುತ್ತದೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ವೇಳೆ ಬಹುತೇಕ ಹೊಸ ಮುಖಗಳಿಗೆ ಮಣೆ ಹಾಕಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಆದರೆ ವಿಧಾನಸಭಾ ಚುನಾವಣೆ ಇನ್ನು ಕೆಲವೇ ತಿಂಗಳು ಇರುವ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಮಾಡಲು ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೆ ಕೊನೆ ಹಂತದಲ್ಲಿ ಸಚಿವರಾಗುವ ಕುರಿತು ಹಲವರಿಗೆ ಇಷ್ಟವಿಲ್ಲವೆಂದು ಹೇಳಲಾಗುತ್ತಿದೆ. ಚುನಾವಣಾ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಮಾಡಲಾಗುತ್ತಿದ್ದು, ಬಿಜೆಪಿ ಹೈಕಮಾಂಡ್ ಕೂಡ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read