HomeIndia'ಸಂಸ್ಕೃತ' ವನ್ನು ಅಧಿಕೃತ ಭಾಷೆಯನ್ನಾಗಿಸುವ ಊಹಾಪೋಹಕ್ಕೆ ತೆರೆ ಎಳೆದ ಕೇಂದ್ರ ಸರ್ಕಾರ

‘ಸಂಸ್ಕೃತ’ ವನ್ನು ಅಧಿಕೃತ ಭಾಷೆಯನ್ನಾಗಿಸುವ ಊಹಾಪೋಹಕ್ಕೆ ತೆರೆ ಎಳೆದ ಕೇಂದ್ರ ಸರ್ಕಾರ

ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಸಂಸ್ಕೃತವನ್ನು ಅಧಿಕೃತ ಭಾಷೆಯನ್ನಾಗಿ ಮಾಡಲಾಗುತ್ತದೆ ಎಂಬ ಊಹಾಪೋಹ ಹರಿದಾಡುತ್ತಿದ್ದು, ಕೇಂದ್ರ ಸರ್ಕಾರ ಈಗ ಇದಕ್ಕೆ ತೆರೆ ಎಳೆದಿದೆ.

ಮಂಗಳವಾರದಂದು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ, ಸಂಸ್ಕೃತವನ್ನು ಅಧಿಕೃತ ಭಾಷೆಯನ್ನಾಗಿ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತದ ಸಂವಿಧಾನ 343 (1) ನೇ ಪರಿಚ್ಛೇದದ ಪ್ರಕಾರ ಕೇಂದ್ರ ಸರ್ಕಾರದ ಅಧಿಕೃತ ಭಾಷೆ ದೇವನಾಗರಿ ಲಿಪಿಯಲ್ಲಿರುವ ಹಿಂದಿ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular