ಸಕಲೇಶಪುರ ತಾಲ್ಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಹಾಸನ: ಸಕಲೇಶಪುರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಯನ್ನು ಹೊಸದಾಗಿ ಭರ್ತಿ ಮಾಡುವ ಸಂಬಂಧವಾಗಿ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ) ರನ್ವಯ 07 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರುಗಳಿಗೆ ಸಕಲೇಶಪುರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ಆ.27 ರ ಸಂಜೆ 5.30 ಗಂಟೆ ಆಗಿರುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ. ದೇವರಾಜ ಅರಸು ಭವನ, ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಡ್ಡರಸ್ತೆ, ಆಕಾಶವಾಣಿ ಹತ್ತಿರ, ಸಾಲಗಾಮೆ ರಸ್ತೆ, ಹಾಸನ ದೂರವಾಣಿ ಸಂಖ್ಯೆ:08172- 295108 ಇಲ್ಲಿಗೆ ಕೊನೆಯ ದಿನಾಂಕದೊಳಗೆ ಸಲ್ಲಿಸಲು ತಿಳಿಸಿದೆ. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ದಾಖಲಾತಿಗಳು: ಎಸ್.ಎಸ್.ಎಲ್.ಸಿ. ಅಂಕಪಟ್ಟಿಯ ದೃಢೀಕೃತ ಪ್ರತಿ, ಎಲ್.ಎಲ್.ಬಿ. ದೃಢೀಕೃತ ಅಂಕಪಟ್ಟಿಗಳು, ವಕೀಲ ವೃತ್ತಿಯ ನೋಂದಣಿ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ಜಾತಿ ಪ್ರಮಾಣ ಪತ್ರ, ವಕೀಲ ವೃತ್ತಿ ನಡೆಸಿದ ಅನುಭವದ ಕುರಿತು ಸಂಕ್ಷಿಪ್ತ ವಿವರಗಳು, ಅರ್ಜಿದಾರರು ಗಣಕ ಯಂತ್ರದ ಪರಿಣಿತಿ/ ಜ್ಞಾನವುಳ್ಳವರೇ ಹೌದಾದಲ್ಲಿ ಈ ಬಗ್ಗೆ ಸಂಕ್ಷಿಪ್ತ ಮಾಹಿತಿ, ಅರ್ಜಿದಾರರ ಭಾವಚಿತ್ರ ಆಸ್ತಕರು ಅರ್ಜಿ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read