ಸಕಲ ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಇಂದು ನಿಧನರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು, “ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read