ಸಚಿವ ಆನಂದ್ ಸಿಂಗ್ ನಂಟು ಹೊಂದಿದ್ದ ಕಂಪನಿಗಳ ಆಸ್ತಿ ಮುಟ್ಟುಗೋಲು

ಆನಂದ್ ಸಿಂಗ್ ಕುಟುಂಬ ಒಡೆತನದ ಎರಡು ಗಣಿಗಳೂ ಸೇರಿದಂತೆ ಒಟ್ಟು ಮೂರು ಗಣಿಗಳು ಅದಿರು ಕಳ್ಳ ಸಾಗಣೆ ಮಾಡಿದ ಆರೋಪದಲ್ಲಿ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ.

ಮಿನರಲ್ ಎಂಟರ್ಪ್ರೈಸಸ್ ಲಿಮಿಟೆಡ್ ನ 5.21 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಕೋರಿಕೆಯಂತೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಅದಿರು ಕಳ್ಳ ಸಾಗಣೆ ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ಆರೋಪವನ್ನು ಹೊರಿಸಲಾಗಿತ್ತು.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತರು ಸಲ್ಲಿಸಿದ್ದ ತನಿಖಾ ವರದಿ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಲ್ಲದೆ ಹಣದ ಅಕ್ರಮ ವರ್ಗಾವಣೆ ತಡೆ ಕಾಯಿದೆ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಕೂಡ ತನಿಖೆ ನಡೆಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read