ಸಚಿವ ಪರಮೇಶ್ವರ್ ನಿವಾಸಕ್ಕೆ ಪೇಜಾವರ ಶ್ರೀ ಭೇಟಿ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ ಪೂರ್ಣ ಪ್ರಮಾಣದಲ್ಲಿ ತಮ್ಮ ಸಚಿವ ಸಂಪುಟವನ್ನು ರಚಿಸಿದ್ದಾರೆ. ಸಚಿವರಾದವರ ಪೈಕಿ ಜಿ. ಪರಮೇಶ್ವರ್ ಕೂಡ ಒಬ್ಬರಾಗಿದ್ದು, ಅವರಿಗೆ ಗೃಹ ಖಾತೆ ಸಿಗಬಹುದು ಎಂದು ಹೇಳಲಾಗುತ್ತಿದೆ.

ಖಾತೆಗಳ ಹಂಚಿಕೆ ಇನ್ನೂ ಆಗಬೇಕಿದ್ದು, ಬಹುತೇಕ ಇಂದು ಫೈನಲ್ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಇದರ ಮಧ್ಯೆ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಭಾನುವಾರದಂದು ಜಿ. ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದ್ದಾರೆ.

ಈ ಸಂದರ್ಭದಲ್ಲಿ ಪರಮೇಶ್ವರ್ ದಂಪತಿ, ಶ್ರೀಗಳಿಗೆ ಫಲ ತಾಂಬೂಲ ನೀಡಿ ನಮಸ್ಕರಿಸಿದ್ದು, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಯಾವ ಸಂಘಟನೆಗಳನ್ನೂ ನಿಷೇಧಿಸುವ ಪ್ರಶ್ನೆ ಸದ್ಯಕ್ಕೆ ಇಲ್ಲ. ಆದರೆ ಕಾನೂನು ಉಲ್ಲಂಘಿಸುವ ಸಂಘಟನೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಖಚಿತ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read