ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಅಚ್ಚರಿ ಹೇಳಿಕೆ ನೀಡಿದ ಕೆ.ಎಸ್. ಈಶ್ವರಪ್ಪ

ಪಾಕಿಸ್ತಾನ, ಹಿಂದೂಸ್ತಾನ ಒಂದಾಗಬೇಕು: ಕೆ.ಎಸ್‌.ಈಶ್ವರಪ್ಪ – Public TV

ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ. ಹಾಗೂ ಈ ಬಾರಿಯ ವಿಸ್ತರಣೆ ವೇಳೆ ಕೆ.ಎಸ್. ಈಶ್ವರಪ್ಪನವರಿಗೆ ಮತ್ತೆ ಸಚಿವರಾಗುವ ಅವಕಾಶ ಸಿಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ ಸ್ವತಃ ಈಶ್ವರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವುದಿಲ್ಲ. ಹಾಗೆಯೇ ಎಲ್ಲರೂ ಮಂತ್ರಿಯಾಗಬೇಕು ಎಂದೇನಿಲ್ಲ. ಇದಕ್ಕಾಗಿ ತಾವು ಕೇಂದ್ರ ನಾಯಕರನ್ನೂ ದೂಷಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಮೂಲಕ ಸಂಪುಟ ವಿಸ್ತರಣೆ ವದಂತಿಗಳಿಗೆ ಈಶ್ವರಪ್ಪ ತೆರೆ ಎಳೆದಿದ್ದು, ಜೊತೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಕಾರಣ ಈ ಪರಿಸ್ಥಿತಿ ಉದ್ಭವಿಸಿದೆ. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ರಾಜ್ಯದ ಜನತೆ ಪೂರ್ಣ ಬಹುಮತ ನೀಡಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದು ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read