ಸಚಿವ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿ ಕುರಿತಂತೆ ಸ್ಪಷ್ಟನೆ ನೀಡಿದ ಪ್ರಹ್ಲಾದ್ ಜೋಶಿ

BIG NEWS: ಸಚಿವ ವಿ. ಸೋಮಣ್ಣ ವಿರುದ್ಧ ಸಮನ್ಸ್ ಜಾರಿ | Kannada Dunia | Kannada News | Karnataka News | India News

ವಸತಿ ಸಚಿವ ವಿ. ಸೋಮಣ್ಣ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ರಾಜ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಸೋಮಣ್ಣ ಅವರ ಜೊತೆ ನಾನು ಸಂಪರ್ಕದಲ್ಲಿದ್ದೇನೆ. ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರ್ಪಡೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಲೋಕಾಯುಕ್ತ ದಾಳಿಯಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಸಿಕ್ಕಿಬಿದ್ದಿರುವ ಕುರಿತಂತೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಲೋಕಾಯುಕ್ತವನ್ನು ಬಲಿಷ್ಠಗೊಳಿಸಿದ್ದೇವೆ. ಕಾನೂನು ತನ್ನ ಕ್ರಮವನ್ನು ಕೈಗೊಳ್ಳುತ್ತದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read