ಸತ್ತ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ; ಪತಿ ಹಾಗೂ ಚಿಕ್ಕಪ್ಪನ ವಿರುದ್ಧ ಪೊಕ್ಸೋ ಕೇಸ್

ಮಧ್ಯಪ್ರದೇಶ: 16 ವರ್ಷದ ಬಾಲಕಿ ಸತ್ತ ಮಗುವಿಗೆ ಜನ್ಮ ನೀಡಿದ್ದು, ಪತಿ ಹಾಗೂ ಚಿಕ್ಕಪ್ಪನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿಯೊಬ್ಬಳು ಇಂದೋರ್ ನಗರದಲ್ಲಿ ಸತ್ತ ಮಗುವಿಗೆ ಜನ್ಮ ನೀಡಿದ್ದು, ಪತಿ ಹಾಗೂ ಚಿಕ್ಕಪ್ಪನ ವಿರುದ್ಧ ಕೇಸ್ ದಾಖಲಾಗಿದೆ. ಬಾಲಕಿ ಏಳು ತಿಂಗಳ ಗರ್ಭಿಣಿಯಾಗಿದ್ದಳು. ಮಂಗಳವಾರ ಆಸ್ಪತ್ರೆಯೊಂದರಲ್ಲಿ ತಲೆ ಬೆಳವಣಿಗೆಯಾಗದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದೋರ್‌ನ ಮಕ್ಕಳ ಕಲ್ಯಾಣ ಸಮಿತಿಯ ದೂರಿನ ಮೇರೆಗೆ ಬಾಲಕಿಯ ಪತಿ ಮತ್ತು ಆಕೆಯ ಚಿಕ್ಕಪ್ಪನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ತೇಜಾಜಿ ನಗರ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪತಿ ಹಾಗೂ ಚಿಕ್ಕಪ್ಪನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡು ಅಕಾಲಿಕ ಹೆರಿಗೆಗೆ ಕಾರಣವಾಯಿತು ಎಂದು ಇಂದೋರ್ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್ ತಿಳಿಸಿದ್ದಾರೆ.

ಬಾಲಕಿ ಮತ್ತು ಆಕೆಯ ಪತಿ ಕೆಲಸಕ್ಕಾಗಿ ಕರ್ನಾಟಕಕ್ಕೆ ಹೋಗಿದ್ದರು, ಅಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಯ ಸಮಯದಲ್ಲಿ ಸಂತ್ರಸ್ತೆ ಗರ್ಭಿಣಿಯಾಗಿರುವುದು ಕಂಡುಬಂದಿದೆ ಎಂದು
ಕರ್ನಾಟಕದ CWCಯು ಯುವತಿಯ ಗರ್ಭಾವಸ್ಥೆಯ ವಿಷಯವನ್ನು ಇಂದೋರ್ CWC ಗೆ ತಿಳಿಸಿದೆ ಎಂದು ಪೋರ್ವಾಲ್ ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಅಭಿಷೇಕ್ ರಂಜನ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read