HomeKarnatakaಸದಾನಂದ ಗೌಡ - ನಳಿನ್ ಕುಮಾರ್ ಕಟೀಲ್ ಭಾವಚಿತ್ರಕ್ಕೆ ಚಪ್ಪಲಿ ಹಾರ; ಇಬ್ಬರು ಆರೋಪಿಗಳು ಅರೆಸ್ಟ್

ಸದಾನಂದ ಗೌಡ – ನಳಿನ್ ಕುಮಾರ್ ಕಟೀಲ್ ಭಾವಚಿತ್ರಕ್ಕೆ ಚಪ್ಪಲಿ ಹಾರ; ಇಬ್ಬರು ಆರೋಪಿಗಳು ಅರೆಸ್ಟ್

ಪುತ್ತೂರಿನಲ್ಲಿ ಬಿಜೆಪಿ ಸೋಲಿಗೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದ ಗೌಡ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರಣ ಎಂಬ ಒಕ್ಕಣೆಯ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಮುಂಜಾನೆ ಒಂದು ಗಂಟೆ ಸುಮಾರಿಗೆ ಏಳು ಮಂದಿಯ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಈ ಬ್ಯಾನರ್ ಅಳವಡಿಸಿದ್ದು, ಈ ಸಂಬಂಧ ಬಿಜೆಪಿಯ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ, ಪೊಲೀಸರಿಗೆ ದೂರು ನೀಡಿದ್ದರು.

ಬ್ಯಾನರ್ ಅಳವಡಿಸಿದ ವಿಚಾರ ಗಮನಕ್ಕೆ ಬರುತ್ತಿದ್ದಂತೆ ನಗರಸಭೆಯವರು ಇದನ್ನು ತೆರವುಗೊಳಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ನರಿಮೊಗ್ರುವಿನ ವಿಶ್ವನಾಥ್ ಹಾಗೂ ಮಾಧವ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular