HomeKarnatakaಸಬ್ ಇನ್ಸ್ ಪೆಕ್ಟರ್ ಗಳ ಕೊರತೆ; 400 ಪಿ ಎಸ್ ಐ ಹುದ್ದೆಗಳ ಶೀಘ್ರ ನೇಮಕ

ಸಬ್ ಇನ್ಸ್ ಪೆಕ್ಟರ್ ಗಳ ಕೊರತೆ; 400 ಪಿ ಎಸ್ ಐ ಹುದ್ದೆಗಳ ಶೀಘ್ರ ನೇಮಕ

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿ ಜೊತೆಗೆ ಇನ್ನೂ 400 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಗಳ ಕೊರತೆ ಇದೆ. ಆದಷ್ಟು ಬೇಗ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಬಗ್ಗೆ ತನಿಖೆ ಮುದುವರೆದಿದೆ. ಮರು ಪರೀಕ್ಷೆ ನಡೆಸಬೇಕು ಎಂದು ಹಿಂದಿನ ಸರ್ಕಾರ ಆದೇಶ ನೀಡಿತ್ತು. ಆದರೆ ಸರ್ಕಾರದ ಆದೆಶಕ್ಕೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಸರ್ಕಾರದ ಅಭಿಪ್ರಾಯವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ ಗೆ ಸಲ್ಲಿಸಲಾಗಿದೆ. ಕೋರ್ಟ್ ಏನು ತೀರ್ಪು ನೀಡುತ್ತೆ ಎಂಬುದನ್ನು ಕಾಯುತ್ತಿದ್ದೇವೆ. ಕೋರ್ಟ್ ತೀರ್ಪಿನಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular