HomeLatest Newsಸರಣಿ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿ ಟೀಮ್ ಇಂಡಿಯಾ; ನಾಳಿನ ಪಂದ್ಯ ಗೆದ್ದರೆ ಏಕದಿನ ರ್ಯಾಂಕಿಂಗ್...

ಸರಣಿ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿ ಟೀಮ್ ಇಂಡಿಯಾ; ನಾಳಿನ ಪಂದ್ಯ ಗೆದ್ದರೆ ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ

ನ್ಯೂಜಿಲ್ಯಾಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಟೀಮ್ ಇಂಡಿಯಾ ಬೀಗುತ್ತಿದೆ. 2-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ ನಾಳೆ ಅಂತಿಮ ಪಂದ್ಯವನ್ನು ಆಡಲಿದೆ.

ಮೂರನೇ ಹಾಗೂ ಅಂತಿಮ ಪಂದ್ಯ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯಲಿದ್ದು, ರೋಹಿತ್ ಶರ್ಮಾ ನೇತೃತ್ವದ ಪಡೆ ಈಗಾಗಲೇ ಆಗಮಿಸಿದೆ. ಹೋಟೆಲ್ ನಲ್ಲಿ ಬೀಡು ಬಿಟ್ಟಿರುವ ಟೀಮ್ ಇಂಡಿಯಾ ಆಟಗಾರರು ತಾಲೀಮು ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳವಾರದಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದಂತಾಗುತ್ತದೆ. ಅಲ್ಲದೆ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿಯೂ ಅಗ್ರಸ್ಥಾನಕ್ಕೇರುವ ಅವಕಾಶವನ್ನು ಹೊಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular