ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಡಿಎ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದು ಅಂತ್ಯಗೊಂಡ ಬಳಿಕ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಶೇಕಡ 4 ತುಟ್ಟಿಭತ್ಯೆ ಹೆಚ್ಚಳ ಮಂಜೂರು ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.

ಮೇ 13 ರಂದು ಚುನಾವಣಾ ನೀತಿ ಸಂಹಿತೆ ಅಂತ್ಯಗೊಳ್ಳಲಿದ್ದು, ಇದಾದ ಬಳಿಕ ತುಟ್ಟಿಭತ್ಯೆ ಮಂಜೂರು ಆದೇಶ ಹೊರಬೀಳಲಿದೆ. ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಈ ಕುರಿತಂತೆ ರಾಜ್ಯ ಸರ್ಕಾರಕ್ಕೆ ಸೂಚನೆಯನ್ನು ನೀಡಿದೆ ಎಂದು ಸಿ.ಎಸ್. ಷಡಕ್ಷರಿ ಹೇಳಿದ್ದಾರೆ.

ಹೀಗಾಗಿ ಮೇ 13ರ ಬಳಿಕ ಶೇಕಡ 4 ಬಾಕಿ ತುಟ್ಟಿಭತ್ಯೆ ಆದೇಶವನ್ನು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ತರಲು ಆದೇಶ ಹೊರಡಿಸುವುದಾಗಿ ಹಣಕಾಸು ಇಲಾಖೆ ಭರವಸೆ ನೀಡಿದೆ ಎಂದು ತಿಳಿಸಿರುವ ಷಡಕ್ಷರಿ, ಏಳನೇ ವೇತನ ಆಯೋಗದ ಶೇಕಡ 17ರಷ್ಟು ಮಧ್ಯಂತರ ಪರಿಹಾರ ಮೊತ್ತವನ್ನು ಏಪ್ರಿಲ್ ವೇತನದಲ್ಲೇ ಪಡೆಯಲು ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದು ಈ ತಿಂಗಳ ವೇತನದಲ್ಲೇ ಸಿಗಲಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read