ಮಂಗಳೂರು: ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾನ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿದೆ.
ಬಿಜೆಪಿ ನಾಯಕರು ಈ ಕೊಲೆ ಹಿಂದೆ ಪಿಎಫ್ ಐ ಕೈವಾಡವಿದೆ ಎಂದು ಶಂಕಿಸಿದ್ದಾರೆ. ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ರೂಪಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಸುಹಾನ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸುವಂತೆ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.