ಸಾಗುವಳಿದಾರರ ಮೇಲಿನ ದೌರ್ಜನ್ಯ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

BIG NEWS: ರಾಜ್ಯಾದ್ಯಂತ ತೀವ್ರಗೊಂಡ ಅನ್ನದಾತನ ಪ್ರತಿಭಟನೆ; ಪ್ರಧಾನಿ ಮೋದಿ 10 ತಲೆ  ಪೋಸ್ಟರ್ ಹಿಡಿದು ರೈತರ ಧರಣಿ | Kannada Dunia | Kannada News | Karnataka News |  India Newsಶಿವಮೊಗ್ಗ: ಸಾಗುವಳಿ ರೈತರ ಮೇಲೆ ನಡೆದ ದೌರ್ಜನ್ಯ, ಹಲ್ಲೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿತು.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಗಂಗಯ್ಯನಪಾಳ್ಯ ಗ್ರಾಮದಲ್ಲಿ ರೈತರು ಸುಮಾರು ಮೂವತ್ತು ನಲವತ್ತು ವರ್ಷಗಳಿಂದ ಕಂದಾಯ ಭೂಮಿಯಲ್ಲಿ ಬಗರ್‌ಹುಕುಂ ಸಾಗುವಳಿ ಮಾಡುತ್ತಿದ್ದಾರೆ. ಈಗ ಅರಣ್ಯ ಇಲಾಖೆಯವರು ಈ ಭೂಮಿ ನಮಗೆ ಸೇರಿದೆ ಎಂದು ಗುಂಡಿ ತೆಗೆದು ಸ್ವಾಧೀನಪಡಿಸಿಕೊಳ್ಳಲು ಮಾ.30ರಂದು ಗ್ರಾಮಕ್ಕೆ ಬಂದಿದ್ದರು. ರೈತರು ಈ ಭೂಮಿಯೆ ನಮಗೆ ಆಧಾರ. ಭೂಮಿಯನ್ನು ಕಸಿದುಕೊಳ್ಳಬೇಡಿ ಎಂದು ಬೇಡಿಕೊಂಡರೂ ಕೂಡ ಅರಣ್ಯಾಧಿಕಾರಿಗಳು ಕೇಳದೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದರು.

ಅಲ್ಲದೆ ಮಹಿಳೆಯರು, ವೃದ್ಧರು ಎನ್ನದೆ ಅರಣ್ಯ ಇಲಾಖೆಯ ಅಧಿಕಾರಿಗಳು ದರ್ಪ ತೋರಿ ರೈತರ ತಲೆಯಲ್ಲಿ ರಕ್ತ ಸುರಿಯುವಂತೆ ಹೊಡೆದಿದ್ದಾರೆ. ಅಲ್ಲದೆ ರೈಮುಖಂಡರನ್ನು ಬಂಧಿಸಿದ್ದಾರೆ. ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದರೂ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿದ್ದಾರೆ. ಜೊತೆಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅರಣ್ಯ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಇದರ ಜೊತೆಗೆ ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ರೈತರ ಮೇಲೆ ಬಿಡಿಎ ಅಧಿಕಾರಿಗಳು ದೌರ್ಜನ್ಯ ಎಸಗಿದ್ದಾರೆ. ಅಲ್ಲಿ ರೈತರ 5 ಎಕರೆ ಸಪೋಟಾ ತೋಟ ನಾಶ ಮಾಡಿದ್ದಾರೆ. ದೌರ್ಜನ್ಯದಿಂದ ರೈತರ ಭೂಮಿಯನ್ನು ಕಸಿದುಕೊಂಡಿದ್ದಾರೆ. ರೈತ ತಾನು ಕೊಟ್ಟ ಜಮೀನಿನಲ್ಲಿಯೇ ಮಾಲೀಕನ ಆಳಾಗಿ ದುಡಿಯುವಂತಹ ಪರಿಸ್ಥಿತಿ ಬಂದಿದೆ ಎಂದು ಮನವಿದಾರರು ತಿಳಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಪದಾಧಿಕಾರಿಗಳಾದ ಇ.ಬಿ. ಜಗದೀಶ್, ಎಸ್. ಶಿವಮೂರ್ತಿ, ಟಿ.ಎಂ. ಚಂದ್ರಪ್ಪ, ಹಿಟ್ಟೂರು ರಾಜು, ಪಂಚಾಕ್ಷರಿ, ಜ್ಞಾನೇಶ್, ಚಂದ್ರಪ್ಪ, ರುದ್ರೇಶ್, ಪಿ.ಡಿ. ಮಂಜಪ್ಪ, ಕೆ. ರಾಘವೇಂದ್ರ ಸೇರಿದಂತೆ ಹಲವರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read