
60 ವರ್ಷದ ದಶರಥ ಡಿ ದುರ್ವೆ ಹಾಗೂ ಅವರ ತಾಯಿ 95 ವರ್ಷದ ಶಾವಕ್ಕ ಶುಕ್ರವಾರದಂದು ಮೃತಪಟ್ಟಿದ್ದಾರೆ.
ದಶರಥ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯಾಹ್ನ ತಮ್ಮ ಮನೆಯಲ್ಲಿಯೇ ವಿಧಿವಶರಾಗಿದ್ದರು.
ಅವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಮಗನ ಅಗಲಿಕೆಯ ನೋವು ತಾಳಲಾರದೆ ತಾಯಿ ಶಾವಕ್ಕ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಒಂದೇ ದಿನ ಮನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆಯಿಂದ ಕುಟುಂಬ ಆಘಾತಕ್ಕೊಳಗಾಗಿದೆ.

