ಸಿಎಂ ಆಗಿ ಇಂದು ಸಿದ್ದು ಪ್ರಮಾಣವಚನ; ಮೈಸೂರಿನ ‘ಇಂದಿರಾ ಕ್ಯಾಂಟೀನ್’ ನಲ್ಲಿ ಉಚಿತ ಹೋಳಿಗೆ ಊಟ….!

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅದ್ದೂರಿ ಸಮಾರಂಭ ನಡೆಯುತ್ತಿದ್ದು, ಇದರಲ್ಲಿ ಪಾಲ್ಗೊಳ್ಳಲು ಈಗಾಗಲೇ ಲಕ್ಷಾಂತರ ಮಂದಿ ಆಗಮಿಸಿದ್ದಾರೆ.

ಸಿದ್ದರಾಮಯ್ಯನವರ ಸ್ವಕ್ಷೇತ್ರ ವರುಣಾ ಹಾಗೂ ಮೈಸೂರಿನಲ್ಲಿ ಸಂಭ್ರಮ ಮನೆ ಮಾಡಿದ್ದು, ನೆಚ್ಚಿನ ನಾಯಕ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕ್ಷಣವನ್ನು ಕಾತರದಿಂದ ಕಾಯುತ್ತಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಕೃಷ್ಣರಾಜ ಯುವ ಬಳಗದ ವತಿಯಿಂದ ಮೈಸೂರಿನ ಗನ್ ಹೌಸ್ ವೃತ್ತದ ಬಳಿ ಇರುವ ಇಂದಿರಾ ಕ್ಯಾಂಟೀನ್ ನಲ್ಲಿ ನೂರಕ್ಕೂ ಅಧಿಕ ಸಾರ್ವಜನಿಕರಿಗೆ ಶುಕ್ರವಾರದಂದು ಉಚಿತವಾಗಿ ಹೋಳಿಗೆ ಊಟವನ್ನು ನೀಡಲಾಗಿದೆ.

ಇದಲ್ಲದೆ ಸಿದ್ದರಾಮಯ್ಯನವರ ದೊಡ್ಡ ಅಭಿಮಾನಿಯಾಗಿರುವ ಹಾಲೆಂಡ್ ನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಉದ್ಯೋಗದಲ್ಲಿರುವ ಬಾಗಲಕೋಟೆ ಮೂಲದ ಅಶೋಕ್ ಹಟ್ಟಿ ಹಾಗೂ ಕುಮಾರ ಕುಟುಂಬಸ್ಥರು ಶುಕ್ರವಾರದಂದು ಅಲ್ಲಿನ ಮುರುಗನ್ ದೇಗುಲದಲ್ಲಿ ವಿಶೇಷ ಪೂಜೆ ನಡೆಸಿ ಸಿದ್ದರಾಮಯ್ಯನವರಿಗೆ ಒಳಿತಾಗಲೆಂದು ಪ್ರಾರ್ಥಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read