ಸಿಎಂ ಆಯ್ಕೆ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ; ಸುಳ್ಳು ಸುದ್ದಿ ಹರಡಿಸಬೇಡಿ ಎಂದ ರಣದೀಪ್ ಸುರ್ಜೇವಾಲ

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ರಣದೀಪ್ ಸುರ್ಜೇವಾಲಾ; ಉಬಯ ನಾಯಕರಿಂದ ಮಹತ್ವದ ಚರ್ಚೆ | Kannada Dunia | Kannada News | Karnataka News | India News

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಇನ್ನು ಅಂತಿಮವಾಗಿ ನಿರ್ಧಾರ ಮಾಡಲಾಗಿಲ್ಲ, ಸುಳ್ಳು ಸುದ್ದಿಗಳಿಂದ ದೂರವಿರಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೆವಾಲಾ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ನಾಯಕರು ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಇನ್ನು ಅಂತಿಮ ನಿರ್ಧಾರವಾಗಿಲ್ಲ. ಅವಿರೋಧವಾಗಿ ಸಿಎಲ್ ಪಿ ನಾಯಕನನ್ನು ಆಯ್ಕೆ ಮಾಡಲು ಯತ್ನಿಸುತ್ತಿದ್ದೇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಯ್ಕೆ ಮಾಡುತ್ತಾರೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಮುಖ್ಯಮಂತ್ರಿ ಬಗ್ಗೆ ಘೋಷಣೆ ಮಾಡುತ್ತಾರೆ ಎಂದರು.

ಕೆಲ ಮಾಧ್ಯಗಳಲ್ಲಿ ಊಹಾಪೋಹದ ವರದಿಗಳು ಬರುತ್ತಿವೆ. ಕಾಂಗ್ರೆಸ್ ನಲ್ಲಿ ಯಾವುದೇ ಸಮಸ್ಯೆಗಳು ಆಗಿಲ್ಲ, ಯಾವುದೆ ಸುಳ್ಳು ಸುದ್ದಿ, ಊಹಾಪೋಹದ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read