ಸಿಎಂ ಮಾರ್ಗದರ್ಶನದಲ್ಲಿ ‘ಪಠ್ಯಪುಸ್ತಕ ಪರಿಷ್ಕರಣೆ’ ಕೈಗೊಳ್ಳುತ್ತೇವೆ; ಶಿಕ್ಷಣ ಸಚಿವ ಮಧು ಬಂಗಾರಪ್ಪ

ಉತ್ತರ ಕನ್ನಡ: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ (Textbook Revision) ಮಾಡಿ ಮಕ್ಕಳಿಗೆ ಅವಶ್ಯಕತೆ ಇದ್ದದ್ದನ್ನು ಮಾತ್ರ ಪಠ್ಯಪುಸ್ತಕದಲ್ಲಿ ಸೇರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ (Minister Madhu Bangarappa) ಹೇಳಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಅವಶ್ಯಕತೆಯಿದೆ. ಮಕ್ಕಳಿಗೆ ಅವಶ್ಯಕತೆ ಇದ್ದದ್ದನ್ನು ಮಾತ್ರ ಹೇಳಿಕೊಡಬೇಕಿದೆ. ತಪ್ಪು ದಾರಿಗೆ ಕೊಂಡೊಯ್ದರೆ ಅವರ ಭವಿಷ್ಯ ಸರಿ ಹೋಗುವುದಿಲ್ಲ. ಕನ್ನಡ ಹಾಗೂ ಸಮಾಜ ವಿಜ್ಞಾನದಲ್ಲಿ ಬದಲಾವಣೆ ಮಾಡಲೇಬೇಕಿದೆ. ಸಿಎಂ ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಪರಿಷ್ಕರಣೆ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮುಂದಿನ 2024ರ ಶೈಕ್ಷಣಿಕ ವರ್ಷದಲ್ಲಿ ಪಠ್ಯಪುಸ್ತಕದಲ್ಲಿ ಆಗಬೇಕಾದ ಬದಲಾವಣೆ ಬಗ್ಗೆ ಇನ್ನೆರಡು ತಿಂಗಳಲ್ಲಿ ಸಮಿತಿ ರಚನೆ ಮಾಡಿ ಕ್ರಮಕ್ಕೆ ಈಗಿನಿಂದಲೇ ಸಿದ್ಧತೆ ನಡೆಸುತ್ತೇವೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read