ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಜಮ್ಮು ಕಾಶ್ಮೀರದ ಮಾಜಿ ಸಿಎಂ ‘ಫಾರೂಕ್ ಅಬ್ದುಲ್’

ಬೆಂಗಳೂರು : ಜಮ್ಮು ಕಾಶ್ಮೀರದ ಮಾಜಿ ಸಿಎಂ ‘ಫಾರೂಕ್ ಅಬ್ದುಲ್’ (Farooq Abdul) ಸದ್ಯ ಕರ್ನಾಟಕಕ್ಕೆ ಭೇಟಿ ನೀಡಿದ್ದು, ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಈ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯರನ್ನು ಕೂಡ ಭೇಟಿಯಾಗಿದ್ದಾರೆ. ಸಿಎಂ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ (Political Secretary) ನಜೀರ್ ಅಹಮದ್ ಮತ್ತಿತರಿದ್ದರು.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (Former PM HD Devegowda) ನಿವಾಸಕ್ಕೆ ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ ಭೇಟಿ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಇದೊಂದು ಸೌಹಾರ್ಯಯುತ ಭೇಟಿಯಾಗಿದ್ದು, ಗೌಡರ ಆರೋಗ್ಯ ವಿಚಾರಿಸಲು ಇಲ್ಲಿಗೆ ಬಂದಿದ್ದಾರೆ ಅಷ್ಟೇ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read