ಸಿದ್ದರಾಮಯ್ಯ ಎದುರಾಗುತ್ತಿದ್ದಂತೆ ಕಾಲಿಗೆ ಬಿದ್ದ ಪ್ರತಾಪ್ ಸಿಂಹ…!

ಮೈಸೂರಿನಲ್ಲಿ ಇಂದು ಇತ್ತೀಚೆಗೆ ನಿಧನರಾದ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ‘ನುಡಿ ನಮನ’ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಮಹದೇವ ಪ್ರಸಾದ್, ಯತೀಂದ್ರ ಸಿದ್ದರಾಮಯ್ಯ, ಸಂಸದ ಪ್ರತಾಪ್ ಸಿಂಹ ಮೊದಲಾದವರು ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ಸಿದ್ದರಾಮಯ್ಯ ವೇದಿಕೆಯಲ್ಲಿ ಆಸೀನರಾಗಿದ್ದವರ ಕೈ ಕುಲುಕುತ್ತಾ ಬಂದಿದ್ದು, ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಸಿಎಂ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read