HomeKarnatakaಸಿದ್ದರಾಮಯ್ಯ ಜೊತೆ ಸುರ್ಜೆವಾಲಾ ಪ್ರತ್ಯೇಕ ಮಾತುಕತೆ; ಒಂದೇ ಕಾರಿನಲ್ಲಿ ಇಬ್ಬರು ನಾಯಕರ ಪ್ರಯಾಣ

ಸಿದ್ದರಾಮಯ್ಯ ಜೊತೆ ಸುರ್ಜೆವಾಲಾ ಪ್ರತ್ಯೇಕ ಮಾತುಕತೆ; ಒಂದೇ ಕಾರಿನಲ್ಲಿ ಇಬ್ಬರು ನಾಯಕರ ಪ್ರಯಾಣ

124 ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ, ಎರಡನೇ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಬಹುತೇಕ ಇಂದು ಸಂಜೆಯೊಳಗಾಗಿ ಎರಡನೇ ಪಟ್ಟಿ ಹೊರ ಬೀಳಲಿದೆ ಎಂದು ಹೇಳಲಾಗಿದೆ.

ಹೀಗಾಗಿ ಕಾಂಗ್ರೆಸ್ ನಾಯಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿದ್ದು, ಇಂದು ಕೋಲಾರಕ್ಕೆ ತೆರಳುವ ವೇಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲು ಉಭಯ ನಾಯಕರು ಒಂದೇ ಕಾರಿನಲ್ಲಿ ತೆರಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು 70 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದು, ಹೆಚ್ಚಿನ ಪೈಪೋಟಿ ಇಲ್ಲದ ಕ್ಷೇತ್ರಗಳಿಗೆ ಹೆಸರು ಪ್ರಕಟಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಪಟ್ಟಿ ಬಿಡುಗಡೆಯಾದ ಬಳಿಕ ಟಿಕೆಟ್ ವಂಚಿತರು ಬಂಡಾಯ ಏಳುವ ಸಾಧ್ಯತೆಯೂ ಇದ್ದು, ಹೀಗಾಗಿ ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular