HomeKarnatakaಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಬೆಂಗಳೂರು: ಹಾದಿ ಬೀದಿಯಲ್ಲಿ ಹೋಗೋರಿಗೆಲ್ಲ ಗ್ಯಾರಂಟಿ ಸ್ಕೀಂ ಕೊಡಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗ್ಯಾರಂಟಿ ಜಾರಿಯ ಭರವಸೆಗಳನ್ನು ಕೊಟ್ಟಿದ್ದರು. ಮೊದಲ ಸಂಪುಟದಲ್ಲಿಯೇ ಗ್ಯಾರಂಟಿ ಜಾರಿ ಬಗ್ಗೆ ಆಶ್ವಾಸನೆ ನೀಡಿದ್ದರು. ಮತದಾರರ ಕಾಲಿಗೆ ಬಿದ್ದು ಮತಪಡೆದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಿಎಂ,
ಡಿಸಿಎಂ ಆಗಿದ್ದಾರೆ. ಈಗ ಹಾದಿ ಬೀದಿಯಲ್ಲಿ ಹೋಗೋರು ಅಂತಿರೋದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular