ಸಿದ್ದರಾಮಯ್ಯ ಪರ ಪ್ರಚಾರಕ್ಕಾಗಿ ಸ್ಪೇನ್ ನಿಂದ ಬಂದ ಬಾಹ್ಯಾಕಾಶ ವಿಜ್ಞಾನಿ….!

ಚುನಾವಣೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ನಾಯಕರುಗಳು ಪ್ರಚಾರ ಮಾಡುವುದು ಸಾಮಾನ್ಯ ಸಂಗತಿ. ಆದರೆ ಇಲ್ಲೊಬ್ಬ ವ್ಯಕ್ತಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಸ್ಪೇನ್ ನಿಂದ ಆಗಮಿಸಿದ್ದಾರೆ.

ಹೌದು, ಮೂಲತಃ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ತುಮಕೂರು ಗ್ರಾಮದ ಸಾಮಾನ್ಯ ರೈತನ ಮಗನಾದ ಬಸವರಾಜ ಸಂಕೀನ್ ಬಾರ್ಸಿಲೋನಾದ ಖಾಸಗಿ ಕಂಪನಿಯೊಂದರಲ್ಲಿ ಬಾಹ್ಯಾಕಾಶ ವಿಜ್ಞಾನಿಯಾಗಿ ಕೆಲಸ ಮಾಡುತ್ತಿದ್ದಾರೆ.

ಸ್ಪೇನ್ ದೇಶದ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಬಸವರಾಜ ಸಂಕೀನ್, ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಯಾದಗಿರಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚೆನ್ನಾರೆಡ್ಡಿ ಪಾಟೀಲ್ ಕುನ್ನೂರ ಪರ ಪ್ರಚಾರಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ.

‘ಭಾರತ್ ಜೋಡೋ’ ಯಾತ್ರೆಯಲ್ಲೂ ಸಹ ರಾಹುಲ್ ಗಾಂಧಿ ಜೊತೆ ಪಾಲ್ಗೊಂಡಿದ್ದ ಅವರು ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ಮೈಸೂರಿನ ವರುಣಾ ಕ್ಷೇತ್ರ ಸೇರಿದಂತೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read