HomeKarnatakaಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ಅವರಿಂದ ಭರ್ಜರಿ ಪ್ರಚಾರ

ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ಅವರಿಂದ ಭರ್ಜರಿ ಪ್ರಚಾರ

ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮವಾಗಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಇಲ್ಲಿ ಬಿಜೆಪಿಯಿಂದ ಸಚಿವ ವಿ. ಸೋಮಣ್ಣ ಕಣಕ್ಕಿಳಿದಿದ್ದು, ಹೀಗಾಗಿ ಭರ್ಜರಿ ಪೈಪೋಟಿ ನಡೆದಿದೆ.

ಸಿದ್ದರಾಮಯ್ಯನವರ ನಾಮಪತ್ರ ಸಲ್ಲಿಕೆ ವೇಳೆ ಅವರ ಮೊಮ್ಮಗ ಧವನ್ ರಾಕೇಶ್ ಕೂಡಾ ಆಗಮಿಸಿದ್ದು, ರಾಜಕೀಯ ಕ್ಷೇತ್ರದಲ್ಲಿ ತಮಗಿರುವ ಆಸಕ್ತಿಯನ್ನು ಹೇಳಿಕೊಂಡಿದ್ದರು. ಆದರೆ ಕಾನೂನು ಪದವಿ ವ್ಯಾಸಂಗ ಪಡೆದ ಬಳಿಕವೇ ರಾಜಕೀಯಕ್ಕೆ ಬರುವುದಾಗಿ ಅವರು ಹೇಳಿದ್ದರು.

ಇದರ ಮಧ್ಯೆ ಸಿದ್ದರಾಮಯ್ಯನವರ ಮೊಮ್ಮಗ ಧವನ್ ರಾಕೇಶ್ ಬಳಿಕ ಅವರ ಸೊಸೆ, ಧವನ್ ಅವರ ತಾಯಿ ಸ್ಮಿತಾ ರಾಕೇಶ್ ವರುಣಾ ಕ್ಷೇತ್ರದಲ್ಲಿ ಮಾವನ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು, ತಾಯೂರು ಗ್ರಾಮದಲ್ಲಿ ಶ್ರೀ ಸಿದ್ದರಾಮಯ್ಯ ಹಾಗೂ ಶ್ರೀ ಚಿಕ್ಕತಾಯಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮನೆಮನೆಗೆ ತೆರಳಿ ಮತ ಯಾಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular