ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಾ ಹೊಸ ವಿವಾದ ಸೃಷ್ಟಿಸಿದ ಈಶ್ವರಪ್ಪ

ಮಡಿಕೇರಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಬರದಲ್ಲಿ ಹೊಸ ವಿವಾದ ಸೃಷ್ಟಿಸಿದ್ದಾರೆ.

ಮಡಿಕೇರಿಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ನರಹಂತಕ ಎಂದು ಕರೆದಿರುವುದು ಖಂಡನೀಯ. ಇಡೀ ವಿಶ್ವವವೇ ಮೆಚ್ಚಿದ ನಾಯಕ ಪ್ರಧಾನಿ ಮೋದಿ. ಅವರನ್ನು ವಿಶ್ವ ಗುರು ಎಂದು ಜಗತ್ತು ಕರೆಯುತ್ತಿದೆ. ಹೀಗಿರುವಾಗ ಸಿದ್ದರಾಮಯ್ಯನವರು ಮಾತ್ರ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ಇಷ್ಟಕ್ಕೇ ಸುಮ್ಮನಾಗದೇ ಈ ಸಮಾವೇಶದ ಮೂಲಕ ಸಿದ್ದರಾಮಯ್ಯನವರಿಗೆ ಒಂದು ಎಚ್ಚರಿಕೆ ನೀಡುತ್ತಿದ್ದೇನೆ. ಇನ್ನೊಮ್ಮೆ ಸಿದ್ದರಾಮಯ್ಯನವರು ಪ್ರಧಾನಿ ಮೋದಿಯವರನ್ನು ನರಹಂತಕ ಎಂದು ಕರೆದರೆ ಅವರ ನಾಲಿಗೆ ಸೀಳಿಬಿಡ್ತೀವಿ ಎಂದು ಗದರಿದ್ದಾರೆ. ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಬರದಲ್ಲಿ ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನಿಡಿದ್ದು, ಕಾಂಗ್ರೆಸ್ ಕೆಂಗಣ್ಣಿಗೆ ಕಾರಣವಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read