HomeKarnatakaಸಿದ್ಧರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ ಸುಧಾಕರ್ ಗೆ ಎಂಟಿಬಿ ತಿರುಗೇಟು; ದೇವರ ಮೇಲೆ ಆಣೆ...

ಸಿದ್ಧರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ ಸುಧಾಕರ್ ಗೆ ಎಂಟಿಬಿ ತಿರುಗೇಟು; ದೇವರ ಮೇಲೆ ಆಣೆ ಮಾಡಲು ಸವಾಲ್

ಬೆಂಗಳೂರು: ಬಿಜೆಪಿ ಸೇರಲು ಸಿದ್ದರಾಮಯ್ಯ ಪ್ರೇರಣೆ ನೀಡಿದ್ದರು ಎಂದು ಮಾಜಿ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿರುವುದಕ್ಕೆ ಮಾಜಿ ಸಚಿವ ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ.

ಸುಧಾಕರ್ ಮನೆ ದೇವರ ಮೇಲೆ ಆಣೆ ಮಾಡಿ ಹೇಳಲಿ ಎಂದು ಎಂಟಿಬಿ ಬಾಗರಾಜ್ ಸವಾಲ್ ಹಾಕಿದ್ದಾರೆ. ಸುಧಾಕರ್ ಆರೋಪ ಸತ್ಯಕ್ಕೆ ದೂರವಾಗಿದೆ. ಸೋತು ಬ್ರಹ್ಮನಿರಸನರಾಗಿ ಮಾತನಾಡುತ್ತಿದ್ದಾರೆ. ಇಷ್ಟು ದಿನ ಅವರು ಏಕೆ ಸುಮ್ಮನಿದ್ದರು. ಈಗ ಪ್ರಸ್ತಾಪ ಮಾಡುತ್ತಿರುವ ಮರ್ಮ ಏನು ಎಂದು ಸುಧಾಕರ್ ವಿರುದ್ಧ ಎಂಟಿಬಿ ನಾಗರಾಜ್ ಕಿಡಿ ಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಮಾನ್ಯ ಸಿದ್ದರಾಮಯ್ಯ ರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ.

ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಏಕೆ ಸುಮ್ಮನಿದ್ದರು?

ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ರವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ?

ಇಷ್ಟು ದಿನ ಮೌನವಾಗಿದ್ದು?ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು?’ ಎಂದು ಎಂಟಿಬಿ ನಾಗರಾಜ್ ಪ್ರಶ್ನಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular