ಸಿ.ಟಿ. ರವಿ ಸೋಲಿಸಲು ಪರೋಕ್ಷವಾಗಿ ಸಹಕಾರ ನೀಡಿದ ಜೆಡಿಎಸ್ ನಾಯಕ ಬೋಜೇಗೌಡರಿಗೆ ಹಾಲಿನ ಅಭಿಷೇಕ…!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ತಮ್ಮ ಒಂದು ಕಾಲದ ಆಪ್ತ ತಮ್ಮಯ್ಯ ವಿರುದ್ಧ ಪರಾಭವಗೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ತಮ್ಮಯ್ಯ ಗೆಲುವಿನ ನಗೆ ಬೀರಿದ್ದಾರೆ.

ಈ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಲ್ಲಿದ್ದರೂ ಸಹ ಆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್. ಬೋಜೇಗೌಡ, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿತ್ತು.

ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಪರೋಕ್ಷವಾಗಿ ಸಹಕಾರ ನೀಡಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರು, ಚಿಕ್ಕಮಗಳೂರಿನ ಹೊಸಮನೆ ಬಡಾವಣೆ ವೃತ್ತದಲ್ಲಿ ಭೋಜೇಗೌಡ ಅವರಿಗೆ ಹೂ ಮಾಲೆ ಹಾಕಿ ಹಾಲು ಸುರಿದು ಅಭಿಷೇಕ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಭೋಜೇಗೌಡ, ಕ್ಷೇತ್ರದಲ್ಲಿ 20 ವರ್ಷದ ಬಿಜೆಪಿ ಆಡಳಿತ ಕೊನೆಗೊಂಡಿದೆ. ನೂತನ ಶಾಸಕರು ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಲಂಚಕ್ಕೆ ಕಡಿವಾಣ ಹಾಕಿ ಉತ್ತಮ ಆಡಳಿತ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read