ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ ಮೂಲಕ ಸೃಷ್ಟಿಸಿದ ಕಾಲ್ಪನಿಕ, ಸುಳ್ಳು ಮಾಹಿತಿ ಒಳಗೊಂಡ ವಿಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಪ್ರಕರಣದಲ್ಲಿ ಸಾಕ್ಷಿ ದೂರುದಾರರು ತಮ್ಮ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿದ ಮಾಹಿತಿಗಳನ್ನು ಹೊರತಾಗಿ ಇತರೆ ಮಾಹಿತಿ ಒಳಗೊಂಡ ಕಾಲ್ಪನಿಕವಾಗಿ ಸೃಷ್ಟಿಸಿದ ಸುಳ್ಳು ಮಾಹಿತಿ ವಿಡಿಯೋವನ್ನು ಯೂಟ್ಯೂಬರ್ ಎಂ.ಡಿ. ಸಮೀರ್ ಪ್ರಸಾರ ಮಾಡಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.