ಸೋಲಿನ ಬಳಿಕ ಚಿತ್ರರಂಗಕ್ಕೆ ಮರಳಲು ಮುಂದಾದರಾ ನಿಖಿಲ್ ಕುಮಾರಸ್ವಾಮಿ ? ಕುತೂಹಲ ಮೂಡಿಸಿದ ರಾಜಕೀಯ ಬೆಳವಣಿಗೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದಾರೆ. ಈ ಮೊದಲು ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿದ್ದ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸೋಲನ್ನಪ್ಪಿದ್ದರು.

ಸತತ ಸೋಲುಗಳಿಂದ ಬೇಸರಗೊಂಡಿರುವ ನಿಖಿಲ್ ಕುಮಾರಸ್ವಾಮಿ, ಈಗ ಮತ್ತೆ ಚಿತ್ರರಂಗಕ್ಕೆ ಮರಳಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿಯವರ ಬದಲಿಗೆ ಮತ್ತೊಬ್ಬರನ್ನು ಆಯ್ಕೆ ಮಾಡುವ ಕುರಿತು ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಇದೇ ಗುರುವಾರದಂದು ವಿಧಾನಸಭಾ ಚುನಾವಣಾ ಸೋಲಿನ ಕುರಿತಂತೆ ಚರ್ಚಿಸಲು ಜೆಡಿಎಸ್ ಆತ್ಮಾವಲೋಕನ ಸಭೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಯುವ ಘಟಕದ ಅಧ್ಯಕ್ಷ ಸ್ಥಾನದ ಕುರಿತು ಮಾತುಕತೆ ನಡೆಯಲಿದೆ ಎಂದು ಹೇಳಲಾಗಿದೆ. ಇನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಯ ಕುರಿತೂ ಮಾತುಗಳು ಕೇಳಿ ಬರುತ್ತಿದ್ದು, ಭವಾನಿ ರೇವಣ್ಣ ಈ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read