ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್; ಮಹಿಳೆಗೆ ಜೈಲು ಶಿಕ್ಷೆ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳನ್ನು ಬರೆದು ಫೋಟೋ ಸಮೇತ ಪೋಸ್ಟ್ ಹಾಕಿದ್ದ ಮಹಿಳೆಯೊಬ್ಬರಿಗೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಕಳೆದ ವರ್ಷ 30 ವರ್ಷದ ಈ ಮಹಿಳೆ, ಬಾಲಕಿ ಮತ್ತವರ ಕುಟುಂಬ ಸದಸ್ಯರ ಫೋಟೋಗಳ ಮೇಲೆ ಅಶ್ಲೀಲ ಪದ ಬರೆದು ಪೋಸ್ಟ್ ಹಾಕಿದ್ದು, ಈ ಸಂಬಂಧ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಕಾಂಡಿಕೆ, ಮಹಿಳೆ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು, ಶುಕ್ರವಾರದಂದು ತೀರ್ಪು ಹೊರ ಬಿದ್ದಿದೆ. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read