ಸೋಶಿಯಲ್ ಮೀಡಿಯಾ ಗೆಳೆಯನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ

ಕಾನ್ಪುರ: ಹುಕ್ಕಾ ಬಾರ್‌ನಲ್ಲಿ ತಂಪು ಪಾನೀಯವನ್ನು ಕುಡಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ವೈದ್ಯ ದಂಪತಿಯ ಪುತ್ರಿ 16 ವರ್ಷದ ಬಾಲಕಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್​ಸ್ಟಾಗ್ರಾಮ್​ನಲ್ಲಿ ಆರೋಪಿಯೊಂದಿಗೆ ಸಂಪರ್ಕ ಹೊಂದಿದ್ದಳು. ಕಾನ್ಪುರದವರಾದ ವಿನಯ್ ಠಾಕೂರ್ ಮತ್ತು ಇತರ ಏಳು ಜನರ ವಿರುದ್ಧ ಹುಡುಗಿಯ ತಂದೆ ಪ್ರಕರಣ ದಾಖಲಿಸಿದ್ದಾರೆ.

ವಿನಯ್ ಠಾಕೂರ್ ಮಾರ್ಚ್ 4 ರಂದು ಕರ್ರಾಹಿಯ ಎಂಜಿ ಕೆಫೆಗೆ ಹುಡುಗಿಯನ್ನು ಕರೆದುಕೊಂಡು ಹೋಗಿದ್ದ. ವಿನಯ್, ಬಾಲಕಿಯ ಪಾನೀಯದಲ್ಲಿ ನಿದ್ದೆ ಬರುವ ಔಷಧವನ್ನು ಹಾಕಿ ಅತ್ಯಾಚಾರ ಎಸಗಿದ್ದಾನೆ.

ನಂತರ ಆತ ಬಾಲಕಿಯನ್ನು ಮತ್ತೊಂದು ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದು, ಅಲ್ಲಿ ಆತನ ಏಳು ಮಂದಿ ಸ್ನೇಹಿತರು ಸೇರಿಕೊಂಡು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಾಲಕಿ ಹಲ್ಲೆಗೆ ಪ್ರತಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಆರೋಪಿ ಆಕೆಯ ದೇಹದಾದ್ಯಂತ ಕಚ್ಚಿದ್ದಾನೆ. ಬಾಲಕಿ, ಮನೆಗೆ ಬಂದು ತನಗಾದ ಕಷ್ಟವನ್ನು ವಿವರಿಸಿದ ನಂತರ ತಂದೆ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ಇದೀಗ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆತ ತನ್ನ ಅಶ್ಲೀಲ ವಿಡಿಯೋ ಮಾಡಿದ್ದು, ಕಳೆದ ಕೆಲವು ದಿನಗಳಿಂದ ತನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ ಎಂದು ಹುಡುಗಿ ತನ್ನ ತಂದೆಗೆ ತಿಳಿಸಿದ್ದಾಳೆ. ವಿಡಿಯೋವನ್ನು ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕುತ್ತಿದ್ದ ಎಂದು ಹೇಳಿದ್ದಾಳೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read