HomeKarnatakaಸ್ಮಶಾನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ಪ್ರಚಾರ ಆರಂಭಿಸಿದ ಪ್ರಜಾಕೀಯ ಅಭ್ಯರ್ಥಿ....!

ಸ್ಮಶಾನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ಪ್ರಚಾರ ಆರಂಭಿಸಿದ ಪ್ರಜಾಕೀಯ ಅಭ್ಯರ್ಥಿ….!

ಖ್ಯಾತ ನಟ ಉಪೇಂದ್ರ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಅವರು ಪ್ರಜಾಕೀಯ ಪಕ್ಷವನ್ನು ಆರಂಭಿಸಿದ್ದು, ವಿಭಿನ್ನ ಭರವಸೆಗಳೊಂದಿಗೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಜಾಕೀಯ ಪಕ್ಷದ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದ್ದು, ಶಿವಮೊಗ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಒಬ್ಬರು ಸ್ಮಶಾನದಲ್ಲಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೌದು, ಪ್ರಜಾಕೀಯ ಪಕ್ಷದ ಟಿಕೆಟ್ ಆಕಾಂಕ್ಷಿ ಆರ್. ವೆಂಕಟೇಶ್ ಸ್ಮಶಾನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಥೇಟ್ ಉಪೇಂದ್ರ ರೀತಿಯಲ್ಲಿಯೇ ಡೈಲಾಗ್ ಹೊಡೆದಿದ್ದಾರೆ. ಅಲ್ಲದೆ ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಜನ ತಿರಸ್ಕರಿಸಿದರೆ ಕೂಡಲೇ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular