ಸ್ವಕ್ಷೇತ್ರಕ್ಕೆ ಆಗಮಿಸಿದ ಸಚಿವರ ಸ್ವಾಗತಿಸಲು ಬಂದವರಿಗೆ ಮದ್ಯ ವಿತರಣೆ….!

 

ಇತ್ತೀಚೆಗೆ ನಡೆದ ಸಂಪುಟ ವಿಸ್ತರಣೆ ವೇಳೆ ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಹಿಂದುಳಿದ ವರ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜವಾಬ್ದಾರಿ ವಹಿಸಲಾಗಿದೆ.

ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಯಾಗಿರುವ ಶಿವರಾಜ ತಂಗಡಗಿ ಸಚಿವರಾದ ಬಳಿಕ ಸೋಮವಾರ ಮೊದಲ ಬಾರಿಗೆ ತಮ್ಮ ತವರು ಕ್ಷೇತ್ರ ಕನಕಗಿರಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಅದ್ದೂರಿ ಸ್ವಾಗತ ನೀಡಿದ್ದಾರೆ.

ಸಚಿವರನ್ನು ಸ್ವಾಗತಿಸಲು ಬಂದವರಿಗೆ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರು ಉಪಹಾರ ವಿತರಣೆ ನೆಪದಲ್ಲಿ ಮದ್ಯದ ವ್ಯವಸ್ಥೆ ಮಾಡಿದ್ದು, 20 ಲೀಟರ್ ಕ್ಯಾನ್ ಗಳಲ್ಲಿ ಮದ್ಯವನ್ನು ತುಂಬಿಸಿಡಲಾಗಿತ್ತು. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆದರೆ ಮದ್ಯ ವಿತರಣೆಯ ವಿಷಯ ಸಚಿವರ ಗಮನಕ್ಕೆ ಬಂದಿರಲಿಲ್ಲವೆನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read