‘ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ – ಮುರಿದ ಮನಸ್ಸುಗಳ ಬೆಸುಗೆಯಾಗಲಿ’; ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್ ಜಾಹೀರಾತು

ಮುಂಬರುವ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಶಿವಮೊಗ್ಗದಲ್ಲಿಯೂ ಚುನಾವಣಾ ಕಾವು ಜೋರಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಯಸ್ಸಿನ ಕಾರಣಕ್ಕೆ ಒಂದೊಮ್ಮೆ ತಮಗೆ ಟಿಕೆಟ್ ನಿರಾಕರಿಸಿದರೆ ಪುತ್ರ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಲು ಮುಂದಾಗಿದ್ದಾರೆ.

ಇದರ ಜೊತೆಗೆ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡ ಖ್ಯಾತ ವೈದ್ಯ ಧನಂಜಯ ಸರ್ಜಿ ಕೂಡ ಆಕಾಂಕ್ಷಿಯಾಗಿದ್ದು, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಾವು ಕೂಡಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಸ್ಪಷ್ಟ ಮಾತುಗಳಲ್ಲಿ ಈಗಾಗಲೇ ಹೇಳಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಟಿಕೆಟ್ ಪೈಪೋಟಿ ಜೋರಾಗಿದೆ.

ಇದರ ಮಧ್ಯೆ ಆಯನೂರು ಮಂಜುನಾಥ್ ಬೆಂಬಲಿಗರು ಶಿವಮೊಗ್ಗ ನಗರದ ವಿವಿಧೆಡೆ ಫ್ಲೆಕ್ಸ್ ಹಾಕಿದ್ದು ಜೊತೆಗೆ ಪತ್ರಿಕೆಗಳಲ್ಲೂ ಜಾಹೀರಾತು ನೀಡಲಾಗಿದೆ. ಇದರಲ್ಲಿ ಹಿಂದೂ ಬಾಂಧವರಿಗೆ ಯುಗಾದಿ ಹಬ್ಬದ ಶುಭಾಶಯಗಳು, ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ಎಂದು ತಿಳಿಸಲಾಗಿದ್ದು, ಜೊತೆಗೆ ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ – ಮುರಿದ ಮನಸ್ಸುಗಳ ಬೆಸುಗೆಯಾಗಲಿ – ಶಿವಮೊಗ್ಗದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲಿ ಎಂದು ಹೇಳಲಾಗಿದೆ. ಈ ಮೂಲಕ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಕೆ.ಎಸ್. ಈಶ್ವರಪ್ಪನವರಿಗೆ ಟಾಂಗ್ ನೀಡಲಾಗಿದೆಯಾ ಎಂಬ ಪ್ರಶ್ನೆ ಮೂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read