ಹರೀಶ್ ನನ್ನ ಆಪ್ತ ಸಹಾಯಕನಲ್ಲ; ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ಸ್ಪಷ್ಟನೆ

ಒಳ ಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಲಾಗಿತ್ತು. ಇದು ಕಾಂಗ್ರೆಸ್ – ಬಿಜೆಪಿ – ಜೆಡಿಎಸ್ ಪಕ್ಷಗಳ ನಾಯಕರ ನಡುವೆ ಆರೋಪ – ಪ್ರತ್ಯಾರೋಪಕ್ಕೆ ಕಾರಣವಾಗಿತ್ತು.

ಇದರ ಮಧ್ಯೆ ಪ್ರತಿಭಟನೆಯಲ್ಲಿ ಹರೀಶ್ ಎಂಬವರು ಕಾಣಿಸಿಕೊಂಡಿದ್ದು, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೆ ಹರೀಶ್, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ಅವರ ಆಪ್ತ ಸಹಾಯಕ ಎಂದು ಹೇಳಲಾಗಿತ್ತು.

ಈ ಕುರಿತಂತೆ ಸ್ಪಷ್ಟನೆ ನೀಡಿರುವ ಶಾರದಾ ಪೂರ್ಯ ನಾಯ್ಕ್, ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಿರುವುದು ವಿಷಾದಕರ. ಪ್ರತಿಭಟನೆ ನಡೆಸುವುದು ಸಂವಿಧಾನಾತ್ಮಕ ಹಕ್ಕು. ಆದರೆ ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದಿದ್ದಾರೆ. ಅಲ್ಲದೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹರೀಶ್ ಎಂಬಾತ ನನ್ನ ಪಿಎ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಆತ ನನ್ನ ಪಿಎ ಆಗಿ ಕೆಲಸ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read