HomeKarnatakaಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಸ್ವರೂಪ್ ಯಾರೆಂದೇ ಗೊತ್ತಿಲ್ಲ ಎಂದ ಹೆಚ್.ಡಿ.ರೇವಣ್ಣ

ಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಸ್ವರೂಪ್ ಯಾರೆಂದೇ ಗೊತ್ತಿಲ್ಲ ಎಂದ ಹೆಚ್.ಡಿ.ರೇವಣ್ಣ

ಹಾಸನ: ವಿಧಾನಸಭಾ ಚುನವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಘೋಷಣೆ ನಿಟ್ಟಿನಲ್ಲಿ ಕಸರತ್ತು ನಡೆಸಿದ್ದು, ಈ ನಡುವೆ ಹಾಸನ ಟಿಕೆಟ್ ಆಕಾಂಕ್ಷಿ ಸ್ವರೂಪ್ ಬಗ್ಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಹಾಸನ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿರುವ ಸ್ವರೂಪ್ ಬಗ್ಗೆ ಸುದ್ದಿಗಾರರು ಕೇಳುತ್ತಿದ್ದಂತೆ ಸ್ವರೂಪ್ ಪ್ರಕಾಶ್ ಯಾರು ಅಂತಲೇ ನನಗೆ ಗೊತ್ತಿಲ್ಲ ಎಂದು ಹೆಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವುದಾಗಿ ಹೇಳಿದ್ದಾರೆ. ಅವರು ಯಾವ ಸಮಾನ್ಯ ಕಾರ್ಯಕರ್ತನ ಬಗ್ಗೆ ಮಾತನಾಡಿದ್ದಾರೆ ಎಂಬುದೂ ಗೊತ್ತಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಒಟ್ಟಾರೆ ಹಾಸನ ಜೆಡಿಎಸ್ ಟಿಕೆಟ್ ವಿಚಾರ ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular