HomeKarnatakaಹಾಸನ ಟಿಕೆಟ್ ಗೊಂದಲದ ನಡುವೆಯೇ ಇಂದಿನಿಂದ ಭವಾನಿ ರೇವಣ್ಣ ಚುನಾವಣಾ ಪ್ರಚಾರ

ಹಾಸನ ಟಿಕೆಟ್ ಗೊಂದಲದ ನಡುವೆಯೇ ಇಂದಿನಿಂದ ಭವಾನಿ ರೇವಣ್ಣ ಚುನಾವಣಾ ಪ್ರಚಾರ

ಹಾಸನ: ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೊಂದಲ ಮುಂದುವರೆದಿರುವ ನಡುವೆಯೇ ಇಂದು ಭವಾನಿ ರೇವಣ್ಣ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಹಾಸನದಲ್ಲಿ ಜೆಡಿಎಸ್ ಟಿಕೆಟ್ ಫೈನಲ್ ಸಾಕಷ್ಟು ಗೊಂದಲದಲ್ಲಿದೆ. ಆದರೂ ಇಂದಿನಿಂದ ಮೂರು ದಿನಗಳ ಕಾಲ ಭವಾನಿ ರೇವಣ್ಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನದ ಗ್ರಾಮಾಂತರ ಭಾಗದಲ್ಲಿ ಚುನಾವಣಾ ಪ್ರಚಾರದಲ್ಲಿ ಭವಾನಿ ರೇವಣ್ಣ ತೊಡಗಿಸಿಕೊಳ್ಳಲಿದ್ದಾರೆ. ಅಲ್ಲದೇ ಮಧ್ಯಾಹ್ನ ಹೆಚ್.ಡಿ.ರೇವಣ್ಣ ಸುದ್ದಿಗೋಷ್ಠಿ ನಡೆಸಲಿದ್ದು, ಹಾಸನದ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular