
ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಮಾನ್ಯ ಮಾಡಿದ್ದು, ಇದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಹೀಗಾಗಿ ಇದರ ವಿಚಾರಣೆ ದ್ವಿ ಸದಸ್ಯ ಪೀಠದಲ್ಲಿ ನಡೆದಿತ್ತು.
ಆದರೆ ಭಿನ್ನ ತೀರ್ಪು ಹೊರ ಬಿದ್ದ ಬಳಿಕ ಈ ಮೊದಲು ಕರ್ನಾಟಕ ಹೈಕೋರ್ಟ್, ಸರ್ಕಾರದ ತೀರ್ಮಾನವನ್ನು ಮಾನ್ಯ ಮಾಡಿ ನೀಡಿದ್ದ ತೀರ್ಪನ್ನೇ ಮುಂದುವರಿಸಲಾಗಿತ್ತು. ಇದೀಗ ಇದರ ವಿಚಾರಣೆಗಾಗಿ ಸುಪ್ರೀಂ ಕೋರ್ಟಿನ ತ್ರಿ ಸದಸ್ಯ ಪೀಠ ರಚನೆಯಾಗಿದೆ.

