ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ರೈಲ್ವೆ ಟಿಕೆಟ್ ರಿಯಾಯಿತಿ ಪುನರಾರಂಭ ಸಾಧ್ಯತೆ

ಸದ್ಯದಲ್ಲೇ ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಈ ಹಿಂದೆ ರದ್ದಾಗಿದ್ದ ಹಿರಿಯ ನಾಗರೀಕರ ರಿಯಾಯಿತಿ ಸೌಲಭ್ಯವನ್ನು ಪುನಾರಂಭಗೊಳಿಸಲು ಚಿಂತನೆ ನಡೆಸಲಾಗಿದೆ.

ರೈಲ್ವೆ ಕುರಿತ ಸಂಸದೀಯ ಮಂಡಳಿ ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು, 60 ವರ್ಷ ಮೇಲ್ಪಟ್ಟ ಪ್ರಯಾಣಿಕರಿಗೆ ನೀಡಲಾಗುತ್ತಿರುವ ರಿಯಾಯಿತಿಯನ್ನು ಈ ಮೊದಲಿನಂತೆ ಪುನರಾರಂಭಿಸಲು ಸೂಚಿಸಿದೆ.

ದೇಶದಲ್ಲಿ ಸಾಂಕ್ರಾಮಿಕ ಕೋವಿಡ್ ಕಾಣಿಸಿಕೊಂಡ ಸಂದರ್ಭದಲ್ಲಿ ಕೇಂದ್ರ ಸರ್ಕಾರ 2020, ಮಾರ್ಚ್ 20ರಂದು ಹಿರಿಯ ನಾಗರಿಕರಿಗೆ ನೀಡುತ್ತಿದ್ದ ರಿಯಾಯಿತಿಯನ್ನು ರದ್ದುಗೊಳಿಸಿತ್ತು. ಇದೀಗ ರೈಲ್ವೆ ಆದಾಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತೆ ಇದನ್ನು ಜಾರಿಗೊಳಿಸಲು ಶಿಫಾರಸ್ಸು ಮಾಡಲಾಗಿದೆ. ಇದು ಜಾರಿಗೊಂಡ ಬಳಿಕ ಎಲ್ಲಾ ರೀತಿಯ ರೈಲುಗಳಲ್ಲಿ 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಶೇಕಡ 50ರಷ್ಟು ಹಾಗೂ ಪುರುಷರಿಗೆ ಶೇಕಡ 40ರಷ್ಟು ರಿಯಾಯಿತಿ ಸಿಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read