HomeKarnatakaಹುಟ್ಟಿದ್ದು ಹಾಸನ, ಮಣ್ಣಾಗೋದು ರಾಮನಗರದಲ್ಲಿ: HDK ಭಾವುಕ ಮಾತು

ಹುಟ್ಟಿದ್ದು ಹಾಸನ, ಮಣ್ಣಾಗೋದು ರಾಮನಗರದಲ್ಲಿ: HDK ಭಾವುಕ ಮಾತು

 

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರಾಮನಗರದಲ್ಲಿ ಇಂದು ಬೃಹತ್ ರೋಡ್ ಶೋ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಹುಟ್ಟಿದ್ದು ಹಾಸನದಲ್ಲಾದರೂ ಮಣ್ಣಾಗುವುದು ರಾಮನಗರದಲ್ಲಿ ಎಂದು ಹೇಳುವ ಮೂಲಕ ಭಾವುಕರಾಗಿದ್ದಾರೆ.

ನನ್ನ ಜೀವ ಇರುವವರೆಗೂ ರಾಮನಗರ ಜಿಲ್ಲೆಯನ್ನು ಬಿಡುವುದಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ಇಲ್ಲಿ ನನ್ನನ್ನು ಸೋಲಿಸಲು ಬಿಜೆಪಿ – ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿವೆ. ಕಾಂಗ್ರೆಸ್ ಗೆಲುವಿಗಾಗಿ ಇಲ್ಲಿ ಬಿಜೆಪಿ ಪ್ರಯತ್ನ ನಡೆಸಲಿದೆ ಎಂದಿದ್ದಾರೆ.

ಇದಕ್ಕೆ ಪ್ರತಿಯಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಗೆಲ್ಲಿಸಲು ಕಾಂಗ್ರೆಸ್ ಯತ್ನಿಸುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular