ಹುಟ್ಟುಹಬ್ಬದ ಸಂಭ್ರಮದಲ್ಲಿ ಡಾರ್ಲಿಂಗ್ ಕೃಷ್ಣ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ  ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ ಇಂದು ತಮ್ಮ 38ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2010ರಲ್ಲಿ ತೆರೆಕಂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟನೆಯ ‘ಜಾಕಿ’ ಚಿತ್ರದಲ್ಲಿ cid ಆಫಿಸರ್ ಪಾತ್ರದಲ್ಲಿ ಅಭಿನಯಿಸಿದ್ದ ಡಾರ್ಲಿಂಗ್ ಕೃಷ್ಣ 2011ರಂದು ಬಿಡುಗಡೆಯಾದ ‘ಮದರಂಗಿ’ ಸಿನಿಮಾದಲ್ಲಿ ಮೊದಲ ಬಾರಿ ನಾಯಕನಾಗಿ ಕಾಣಿಸಿಕೊಂಡರು. ನಂತರ ಎಲ್ಲಾ ವರ್ಗದ ಪಾತ್ರಗಳಲ್ಲೂ ಮಿಂಚಿದ ಇವರು 2020ರಲ್ಲಿ ‘ಲವ್ ಮಾಕ್‌ಟೇಲ್‌’ ಚಿತ್ರವನ್ನು ನಿರ್ದೇಶಿಸಿ ನಾಯಕನಾಗಿ ನಟಿಸಿದರು. ಈ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗುವುದಲ್ಲದೇ ಕೊರೋನಾ ಲಾಕ್ಡೌನ್ ಸಮಯದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆಯುವ ಮೂಲಕ ದಾಖಲೆ ಬರೆಯಿತು.

ಒಂದರ ಮೇಲೊಂದು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ಡಾರ್ಲಿಂಗ್ ಕೃಷ್ಣ ಇತ್ತೀಚಿಗೆ ‘love me or hate me’ ಸಿನಿಮಾ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸ್ಯಾಂಡಲ್ ವುಡ್ ನ ಹಲವಾರು ಸಿನಿತಾರೆಯರು ಡಾರ್ಲಿಂಗ್ ಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read