ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರೀಲೀಲಾ

ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮಾಡಿಸಿರುವ ನಟಿ ಶ್ರೀಲೀಲಾ ಇಂದು 21ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ನಟಿ ಶ್ರೀಲೀಲಾ 2019ರಲ್ಲಿ ತೆರೆಕಂಡ ಎ.ಪಿ. ಅರ್ಜುನ್ ನಿರ್ದೇಶನದ ‘ಕಿಸ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ ಅದೇ ವರ್ಷದಲ್ಲಿ ರೋರಿಂಗ್ ಸ್ಟಾರ್ ಶ್ರೀ ಮುರಳಿ ಜೊತೆ ‘ಭರಾಟೆ’ ಸಿನಿಮಾದಲ್ಲಿ ಅಭಿನಯಿಸಿದರು.

ನಟಿ ಶ್ರೀಲೀಲಾ 2021ರಲ್ಲಿ ಬಿಡುಗಡೆಯಾದ ‘ಪೆಳ್ಳಿಸಂದಡಿ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಟಾಲಿವುಡ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ನಂತರ ಟಾಲಿವುಡ್ ಚಿತ್ರರಂಗದ ಬೇಡಿಕೆಯ ನಟಿಯಾಗಿದ್ದಾರೆ.

ಇತ್ತೀಚೆಗೆ ತೆಲುಗಿನಲ್ಲಿ ಸುಮಾರು 7 ಸಿನಿಮಾಗಳಲ್ಲಿ ಬಿಜಿಯಾಗಿದ್ದು ಕನ್ನಡದ ಒಂದು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಅವರ  ಪೋಸ್ಟರ್ ಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡಗಳು ಶುಭಾಶಯ ಕೋರಲಿವೆ.

Sreeleela Photos [HD]: Latest Images, Pictures, Stills of Sreeleela - FilmiBeat

ಶ್ರೀಲೀಲಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರ ಖ್ಯಾತಿ ದಿನೇದಿನೇ ಹೆಚ್ಚುತ್ತಲೇ ಇದೆ. ಅವರು ಸಾಕಷ್ಟು ದೊಡ್ಡ ಸ್ಟಾರ್​ಗಳ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read