ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಕಾರಣ ಸಿಡಿದೆದ್ದು ಕಾಂಗ್ರೆಸ್ ಸೇರ್ಪಡೆಯಾಗಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ತಮ್ಮ ಮತ ಚಲಾಯಿಸಿದ್ದಾರೆ.
ಮತದಾನದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲ ಜಾತಿ, ಧರ್ಮಗಳ ಮತದಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅತಿ ಹೆಚ್ಚು ಮತಗಳ ಅಂತರದಿಂದ ತಾವು ಜಯಗಳಿಸುವ ವಿಶ್ವಾಸವಿದೆ ಎಂದಿದ್ದಾರೆ.
https://twitter.com/ANI/status/1656155732310654977