HomeKarnatakaಹೃದಯ ವಿದ್ರಾವಕ ಘಟನೆ: ಸಕಾಲಕ್ಕೆ ಅಂಬುಲೆನ್ಸ್ ಸಿಗದೆ ನರಳಿ ಪ್ರಾಣಬಿಟ್ಟ ಬೈಕ್ ಸವಾರ

ಹೃದಯ ವಿದ್ರಾವಕ ಘಟನೆ: ಸಕಾಲಕ್ಕೆ ಅಂಬುಲೆನ್ಸ್ ಸಿಗದೆ ನರಳಿ ಪ್ರಾಣಬಿಟ್ಟ ಬೈಕ್ ಸವಾರ

ಹಾಸನ ಜಿಲ್ಲೆಯಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರ ರಕ್ತಸ್ರಾವದಿಂದ ರಸ್ತೆ ಬದಿ ನರಳುತ್ತ ಬಿದ್ದಿದ್ದ ಬೈಕ್ ಸವಾರ ಸಕಾಲಕ್ಕೆ ಅಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಗುರುವಾರ ತಡರಾತ್ರಿ ಹಾಸನ ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಇಬ್ಬೀಡು ಗ್ರಾಮದ ಆನಂದ್ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಇದರ ಪರಿಣಾಮವಾಗಿ ಆನಂದ್ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು.

ಇದನ್ನು ಗಮನಿಸಿದ ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿದ್ದು, ಆದರೆ ತಕ್ಷಣವೇ ತುರ್ತು ಚಿಕಿತ್ಸಾ ವಾಹನ ಬರಲಿಲ್ಲ ಎಂದು ಹೇಳಲಾಗಿದೆ. ಇದರ ಪರಿಣಾಮವಾಗಿ ತೀವ್ರ ರಕ್ತಸ್ರಾವದಿಂದ ಆನಂದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular